ರೇಣುಕಾ ಸ್ವಾಮಿ ಕೊಲೆ ಕೇಸ್​: ಪವಿತ್ರಾ ಗೌಡ ಎ1, ದರ್ಶನ್ ಎ2 ಆರೋಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 
 
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ದರ್ಶನ್​ ಎ2 ಹಾಗೂ ಕೆ. ಪವನ್​ ಎ3 ಆಗಿದ್ದಾನೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದ್ದು, 13 ಜನರ ಮೆಡಿಕಲ್​ ಟೆಸ್ಟ್​ ಮಾಡಿಸಲಾಗಿದೆ. ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ.ಹೀಗಾಗಿ ದರ್ಶನ್​ ಜೈಲುಪಾಲಾಗುವ ಸಾಧ್ಯತೆ ದಟ್ಟವಾಗಿದೆ.

ದರ್ಶನ್​, ಪವಿತ್ರಾ ಗೌಡ ಹಾಗೂ ಅವರ ಸಹಚರರ ವಿರುದ್ಧ ಅನೇಕ ಸಾಕ್ಷಿಗಳು ಸಿಗುತ್ತಿವೆ. ಕೊಲೆ ನಡೆದ ಶೆಡ್​ಗೆ ಅದೇ ರಾತ್ರಿ ದರ್ಶನ್​ ಕಾರು ಬಂದಿತ್ತು ಎಂಬುದಕ್ಕೆ ಸಿಸಿಟಿವಿ ದೃಶ್ಯಗಳು ಲಭ್ಯವಾಗಿವೆ. ಹೆಚ್ಚಿನ ತನಿಖೆಗಾಗಿ ಪೊಲೀಸ್​ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!