ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಪ್ರಕರಣದ A1 ಆರೋಪಿ ಆಗಿರುವ ಪವಿತ್ರ ಗೌಡ ಜಾಮೀನು ಅರ್ಜಿ ಕೂಡ ಅಕ್ಟೋಬರ್ 4ಕ್ಕೆ ಮಂದೂಡಿದೆ.
ಇಂದು ಪ್ರಕರಣದ ಆರೋಪಿ ಆಗಿರುವ ಪವಿತ್ರ ಗೌಡ ಸಲ್ಲಿಸಿದ ಜಾಮೀನು ಅರ್ಜಿಯ ಕುರಿತು ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಇವಳೇ ಪವಿತ್ರ ಗೌಡ ಪರ ವಕೀಲರು ವಾದಿಸಿದರು. ಬಳಿಕ ನ್ಯಾಯಾಧೀಶರು ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.
ಇದರ ಜೊತೆಗೆ ಪ್ರಕರಣದ ಮತ್ತೊರ್ವ ಆರೋಪಿಯಾಗಿರುವ ರವಿಶಂಕರ್ ಜಾಮೀನು ಅರ್ಜಿಯ ವಿಚಾರಣೆ ಕೂಡ ಕೋರ್ಟ್ ಮಂದೂಡಿದೆ. ಈಗಾಗಲೇ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಆದರೆ, ಈ ಮೂವರು ಆರೋಪಿಗಳಿಗೆ ಯಾರು ಶ್ಯುರಿಟಿ ಕೊಡದ ಕಾರಣ ಅವರು ಇನ್ನೂ ಜೈಲಿನಿಂದ ಬಿಡುಗಡೆಯಾಗಿಲ್ಲ.