ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿ ಆಗಿರುವ ನಟಿ ಪವಿತ್ರ ಗೌಡ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.
ಎರಡು ದಿನಗಳ ಹಿಂದೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಆ ಮೂರು ಆರೋಪಿಗಳು ಇನ್ನೂ ಜೈಲಿನಲ್ಲಿ ಇದ್ದಾರೆ. ಇನ್ನು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 27 ರಂದು ನಡೆಯಲಿದೆ.