ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪ್ರಕರಣದ A13 ಆರೋಪಿ ದೀಪಕ್‌, A8 ರವಿಶಂಕರ್ ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಇನ್ನು ಮೂವರ ಜಾಮೀನು ಅರ್ಜಿ ಆದೇಶವನ್ನು ಅ.16ಕ್ಕೆ ಕಾಯ್ದಿರಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸೆಷನ್ಸ್ ಕೋರ್ಟ್ ಸುಧೀರ್ಘ ವಿಚಾರಣೆ ನಡೆಸಲಾಗಿತ್ತು. ಈ ಬಗ್ಗೆ ಇಂದು ವಾದ ವಿವಾದದ ಆಧಾರದಲ್ಲಿ ಆದೇಶ ನೀಡಿದ ನ್ಯಾಯಾಲಯದ ನಟ ದರ್ಶನ್ ಸೇರಿದಂತೆ 6 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವ ಆದೇಶವನ್ನು ಕಾಯ್ದಿರಿಸಿತ್ತು. ಇನ್ನು ಸರ್ಕಾರದ ಪರವಾಗಿ (ಅಂದರೆ ರೇಣುಕಾಸ್ವಾಮಿ ಕೊಲೆ ಕೇಸಿನ ತನಿಖೆ ಕುರಿತು) ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು. ಇನ್ನು ನಟ ದರ್ಶನ್ ಪರವಾಗಿ ಹಿರಿಯ ವಕೀಲ ನಾಗೇಶ್ ಅವರು ವಾದ ಮಂಡಿಸಿದ್ದರು. ಕಳೆದ ನಾಲ್ಕು ದಿನಗಳಿಂದ ವಾದ ವಿವಾದ ಆಲಿಸಿ ಇದೀಗ ಆದೇಶ ಹೊರಡಿಸಲಾಗಿದೆ.

ಇನ್ನು ದರ್ಶನ್ ಗ್ಯಾಂಗ್‌ ಆರೋಪಿಗಳಾದ ವಿನಯ್, ಪ್ರದೂಷ್ ಹಾಗೂ ಜಗದೀಶ್ ಜಾಮೀನು ಅರ್ಜಿ ಆದೇಶವನ್ನು ಅ.16ಕ್ಕೆ ಕಾಯ್ದಿರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!