ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾಗೌಡ, ಹಾಗೂ ಎ-2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27 ಕ್ಕೆ ಮುಂದೂಡಿಕೆಯಾಗಿದ್ದು, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಸೆ.25 ಕ್ಕೆ ನಡೆಯಲಿದೆ.
ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಈ ಆದೇಶ ಹೊರಡಿಸಿದೆ.
ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಗರದ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆದಿದೆ . ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಜಾಮೀನು ಕೋರಿ ಸೆಪ್ಟೆಂಬರ್ 21ರಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಸೆಪ್ಟೆಂಬರ್ 21ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 23ಕ್ಕೆ ಮುಂದೂಡಿತ್ತು. ಇಂದು ದರ್ಶನ್ ಅರ್ಜಿ ವಿಚಾರಣೆಗೆ ಬರಲಿದ್ದು, ಕಾಮಾಕ್ಷಿಪಾಳ್ಯ ಠಾಣೆ ತಾನಿಕಾಧಿಕಾರಿಗಳು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 3991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ.