April 6, 2026
Monday, April 6, 2026
spot_img

ರೇಣುಕಾಸ್ವಾಮಿ ಕೊಲೆ ಕೇಸ್: ಜಾಮೀನು ಅರ್ಜಿ ಹಿಂಪಡೆದ ನಟಿ ಪವಿತ್ರಾ ಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡ ಹೈಕೋರ್ಟ್‌ಗೆ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸೋಮವಾರ ವಾಪಸ್ ಪಡೆದಿದ್ದಾರೆ.

ಕೆಲವು ದಿನಗಳ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ, ಮಗಳ ಪರೀಕ್ಷೆ ಕಾರಣ ನೀಡಿ, ಆಕೆಗೆ ಪರೀಕ್ಷಾ ಸಿದ್ಧತೆಗೆ ಸಹಾಯ ಮಾಡಲು ಅವಕಾಶ ನೀಡುವಂತೆ ಕೋರಿಹೈಕೋರ್ಟ್‌ಗೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಆದರೆ ಇದೀಗ ಸಮಯ ಕಳೆದುಹೋಗಿದ್ದು, ಪವಿತ್ರಾಗೌಡ ಮಗಳ ಪರೀಕ್ಷೆಗಳು ಮುಕ್ತಾಯಗೊಂಡಿವೆ. ಹೀಗಾಗಿ ಪವಿತ್ರಾಗೌಡ ಪರ ವಕೀಲರು, ಅರ್ಜಿಯನ್ನು ವಾಪಸ್ ಪಡೆಯುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ನ್ಯಾಯಪೀಠವು ಈ ಮನವಿಯನ್ನು ಪುರಸ್ಕರಿಸಿ, ಅರ್ಜಿಯನ್ನು ವಜಾಗೊಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !