ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದೀಗ ಮತ್ತೋರ್ವ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
ಚಿತ್ರದುರ್ಗ ಡಿವೈಎಸ್ಪಿ ಕಚೇರಿಯಲ್ಲಿ ಆರೋಪಿ ಶರಣಾಗಿದ್ದು, ಈತನನ್ನು ರವಿ ಎಂದು ಗುರುತಿಸಲಾಗಿದೆ. ರಘು ಮತ್ತು ತಂಡದ ಜೊತೆ ಸೇರಿಕೊಂಡು ಈತ ರೇಣುಕಾಸ್ವಾಮಿಯನ್ನು ಕಾರಿನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಕುರುಬರಹಟ್ಟಿ ಗ್ರಾಮದ ನಿವಾಸಿಯಾದ ರವಿ, ರಘು ಮತ್ತು ತಂಡದೊಂದಿಗೆ ಸೇರಿಕೊಂಡು ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ. ಬಳಿಕ ಆತನನ್ನು ಬಾಡಿಗೆ ಕಾರು ಮಾಡಿಕೊಂಡು ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿರುವ ಶೆಡ್ಗೆ ತಂದು ಬಿಟ್ಟಿದ್ದ ಎಂದು ವರದಿಯಾಗಿದೆ.