ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ಬೇಲ್ ಅರ್ಜಿ ಇಂದು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನ ತನಿಖೆಯ ಲೋಪದೋಷಗಳನ್ನು ನ್ಯಾಯಾಲಯ ಮುಂದಿಟ್ಟರು.
ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದ್ದಾರೆ.
ನಟ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ಸತತ 1 ಗಂಟೆಗಳ ಕಾಲ ವಾದ ಮಂಡಿಸಿ ವಾದ ಮುಕ್ತಾಯ ಮಾಡಿದರು. ಬಳಿಕ ನ್ಯಾಯಾಧೀಶರು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ.
ವಿಚಾರಣೆ ಆರಂಭವಾಗ್ತಿದ್ದಂತೆ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ರೇಣುಕಾಸ್ವಾಮಿ ಕೇಸ್ನ ಹೈ-ವಿಟ್ನೆಸ್ಗಳ ಸ್ವಇಚ್ಚಾ ಹೇಳಿಕೆಗಳನ್ನು ಓದಿದ್ರು. ಇಬ್ಬರು ಸಾಕ್ಷಿಗಳ ಹೇಳಿಕೆ ನೋಡಿದ್ರೆ ಅವರು ಘಟನಾ ಸ್ಥಳದಲ್ಲೇ ಇರಲಿಲ್ಲ ಎನ್ನುವ ಅನುಮಾನ ಮೂಡಿದೆ ಎಂದಿದ್ದಾರೆ.