ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಚಿತ್ರ ನಟ ದರ್ಶನ್ ಸಹಿತ ನಾಲ್ವರ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದ್ದು, ಮುಂದಿನ ನಡೆ ಕುತೂಹಲ ಕೆರಳಿಸಿದೆ.
ದರ್ಶನ್, ವಿನಯ್, ಧನರಾಜ್, ಪ್ರದೋಶ್ ಅವರುಗಳನ್ನು ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಮತ್ತೆ ಕೋರ್ಟ್ಗೆ ಹಾಜರುಪಡಿಸುತ್ತಿದ್ದಾರೆ. ಈ ನಡುವೆ ಮತ್ತಷ್ಟು ವಿಚಾರಣೆಗೆ ಪೊಲೀಸರು ಕೋರುತ್ತಾರೆಯೇ? ಇಲ್ಲ ನ್ಯಾಯಾಲಯ ಜೈಲಿನ ಬಾಗಿಲು ತೋರಿಸುತ್ತದೆಯೇ ಎಂಬುದು ಕೆಲವೇ ಕ್ಷಣಗಳಲ್ಲಿ ಸ್ಪಷ್ಟವಾಗಲಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಈಗಾಗಲೇ ಮೂರು ಬಾರಿ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯ ಬಳಿಕ ಎಲ್ಲಾ ನಾಲ್ವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.