ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಗುರುವಾರ ದರ್ಶನ್ & ಗ್ಯಾಂಗ್ ಕಸ್ಟಡಿ ಅಂತ್ಯವಾಗಲಿದೆ. ಈ ಹಿನ್ನೆಲೆ ಇಂದು ಆರೋಪಿಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲ್ತ್ ಚೆಕಪ್ ನಡೆಸಲಾಯಿತು.
ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ ನಲ್ಲಿ ದರ್ಶನ ಸೇರಿ ಉಳಿದ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ ದರ್ಶನ್, ಪವಿತ್ರಾ ಗೌಡ ಸೇರಿ 10 ಆರೋಪಿಗಳಿಗೆ ಡಿಎನ್‍ಎ ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಇದಕ್ಕಾಗಿ ಆರೋಪಿಗಳ ರಕ್ತ, ಕೂದಲಿನ ಮಾದರಿ ಸಂಗ್ರಹ ಮಾಡಲಾಗಿದೆ. ಕೊಲೆ ನಡೆದ ಜಾಗದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗೂ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ.
ಎಫ್‍ಎಸ್‍ಎಲ್ ಗೆ ಈ ಕೂದಲು, ರಕ್ತದ ಮಾದರಿ ಕಳುಹಿಸಿ ತಾಳೆ ಹಾಕಲಾಗುತ್ತದೆ. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗಳು ಒಂದೇ ಆದಲ್ಲಿ ಕೊಲೆಗೆ ಮತ್ತಷ್ಟು ಸಾಕ್ಷ್ಯ ಲಭ್ಯವಾದಂತಾಗಲಿದೆ.
ನಾಳೆ ದರ್ಶನ್ & ಗ್ಯಾಂಗ್ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ಹೀಗಾಗಿ ಗುರುವಾರ ಪೊಲೀಸರು ಆರೋಪಿಗಳನ್ನು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ.