ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಅರೆಸ್ಟ್ ಆಗಿದ್ದರು. ಇವರೆಲ್ಲರೂ ಈಗ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಈ ಪ್ರಕರಣದ 17 ಆರೋಪಿಗಳು ಇಂದು ಕೋರ್ಟ್ ಮುಂದೆ ಹಾಜರಾಗಿದ್ದಾರೆ.
ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ 17 ಆರೋಪಿಗಳ ವಿಚಾರಣೆ ನಡೆದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.