ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ.
ಜಾಮೀನಿನ ಮೇಲೆ ಹೊರಗಿರುವ ಆರೋಪಿಗಳು ನ್ಯಾಯಾಧೀಶರ ಮುಂದೆ ತಮ್ಮ ಹೇಳಿಕೆ ನೀಡಲಿದ್ದಾರೆ. ಕೋರ್ಟ್‌ನಲ್ಲಿ ದರ್ಶನ್ ಮತ್ತು ಪವಿತ್ರಾ ಮತ್ತೆ ಮುಖಾಮುಖಿಯಾಗುವ ಸಾಧ್ಯತೆ ಇದೆ.
ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಫೆ.25 ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತ್ತು, ಅದರಂತೆ ಇಂದು ಎಲ್ಲಾ 17 ಆರೋಪಿಗಳು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಲಿದ್ದಾರೆ.