ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದೀಗ ರಾಜ್ಯ ಪೊಲೀಸ್ ಇಲಾಖೆಯು ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಏಪ್ರಿಲ್ 22ಕ್ಕೆ ಮುಂದೂಡಲಾಗಿದೆ.
ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಪ್ರಕರಣದ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಿತು. ಬಳಿಕ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದರು. ಸುಪ್ರೀಂಕೋರ್ಟ್ನಲ್ಲಿಯೂ ದರ್ಶನ್ ಪರವಾಗಿ ವಕೀಲ ನಾಗೇಶ್ ವಕಾಲತ್ತು ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.