ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಸಹಚರರ ಜಾಮೀನು ಭವಿಷ್ಯ ಗುರುವಾರ (ಜುಲೈ 17) ಸುಪ್ರೀಂ ಕೋರ್ಟ್ನಲ್ಲಿ ನಿರ್ಧಾರ ಆಗಲಿದೆ.
2024ರ ಡಿಸೆಂಬರ್‌ನಲ್ಲಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಕೋರಿದೆ. ಅದಕ್ಕೆ ಸಂಬಂಧಿಸಿದಂತೆ ಜುಲೈ 17ರಂದು ವಿಚಾರಣೆ ನಡೆಯಲಿದೆ.
ದರ್ಶನ್ ಪ್ರಭಾವಿ ವ್ಯಕ್ತಿ ಆದ ಕಾರಣ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬ ಕಾರಣದಿಂದ ಅವರಿಗೆ ನೀಡಿರುವ ಜಾಮೀನನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ. ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.