ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಲಾಕಪ್ ನಲ್ಲಿರುನ ನಟ ದರ್ಶನ್, ಅವರ ಆಪ್ತ ಗೆಳತಿ ಪವಿತ್ರಾ ಗೌಡ ಸೇರಿದಂತೆ ಇತರ 11 ಮಂದಿ ಆರೋಪಿಗಳ ವಿರುದ್ಧ ಯಾವುದೇ ಕಾರಣಕ್ಕೂ ಸಾಫ್ಟ್ ಕಾರ್ನರ್ ತೋರಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇದೊಂದು ಕೊಲೆ ಪ್ರಕರಣವಾಗಿರುವುದರಿಂದ ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು, ದರ್ಶನ್ ವಿಚಾರದಲ್ಲಿ ಸಾಫ್ಟ್ ಆಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಪರಮೇಶ್ವರ್ ಅವರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಹತ್ಯೆಗೀಡಾಗಿರುವ ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ, ತಪ್ಪು ಮಾಡಿದ್ರೆ ಶಿಕ್ಷೆ ಖಂಡಿತ ಎಂದು ಡಾ. ಪರಮೇಶ್ವರ ಹೇಳಿದ್ದಾರೆ.