ರೇಣುಕಾಸ್ವಾಮಿ ಕೊಲೆ ಪ್ರಕರಣ: 13 ಅಲ್ಲ, 17 ಆರೋಪಿಗಳ ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 13 ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದ್ದು, ಇದೀ 13 ಮಂದಿ ಅಲ್ಲ, ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಕಾಮಾಕ್ಷಿ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಾಗಿದೆ.

ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದರು.
ಆದ್ರೇ ಈ ಪ್ರಕರಣದಲ್ಲಿ17 ಮಂದಿ ಆರೋಪಿಗಳು ಭಾಗಿಯಾಗಿರೋದಾಗಿ ಪೊಲೀಸರ ಎಫ್‌ಐಆರ್ ನಿಂದ ತಿಳಿದು ಬಂದಿದೆ.

ಕಾಮಾಕ್ಷಿ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ರೇ, ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಇನ್ನೂ ಪವನ್ ಎ3, ರಾಘವೇಂದ್ರ ಎ4, ನಂದೀಶ್ ಎ5, ಜಗದೀಶ್ ಆಲಿಯಾಸ್ ಜಗ್ಗು ಎ6, ಅನು ಎ7, ರವಿ ಎ8, ರಾಜು ಎ9, ವಿನಯ್ ಎ10, ನಾಗರಾಜು ಎ11, ಲಕ್ಷ್ಮಣ್ ಎ12, ದೀಪಕ್ ಎ13, ಪ್ರದೋಶ್ 14, ಕಾರ್ತಿಕ್ ಎ15, ಕೇಶವಮೂರ್ತಿ ಎ16 ಹಾಗೂ ನಿಖಿಲ್ ನಾಯಕ್ ಎ17 ಎಂಬುದಾಗಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!