ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಲಾಗಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಸುಪ್ರೀಂ ಕೋರ್ಟ್‌ನ ನ್ಯಾ.ಜೆ.ಬಿ ಪಾರ್ದಿವಾಲ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ ಮೇ 14ಕ್ಕೆ ವಿಚಾರಣೆಯನ್ನು ಮುಂದೂಡಿದೆ.