ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಉಳಿದ ಆರೋಪಿಗಳಿಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು.ಈ ಹಿನ್ನೆಲೆ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ವಿಶ್ವನಾಥ್ ಗೌಡರ್ ಈ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು, ತುಮಕೂರು ಜೈಲಿನಿಂದ ಆರೋಪಿಗಳು ಹಾಜರಾಗಿದ್ದರು.