ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಸೋಮವಾರ (ಆ.19) ಅರ್ಜಿ ಸಲ್ಲಿಸಿದ್ದಾರೆ.
ಆಗಸ್ಟ್ 22ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳೇ ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಭರದ ಸಿದ್ಧತೆ ನಡೆಸುತ್ತಿದ್ದಾರೆ. ಈ ಹೊತ್ತಿನಲ್ಲಿ ಪವಿತ್ರಾಗೌಡ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ.