ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ನ್ಯಾಯಾಲಯದಲ್ಲಿ ತೀವ್ರ ಹಿನ್ನಡೆಯಾಗಿದೆ.
ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರವೇ ಜೈಲುವಾಸವೇ ಗತಿಯಾಗಿದೆ. ಇದೇ ವೇಳೆ ಮತ್ತೋರ್ವ ಆರೋಪಿ ಅನುಕುಮಾರ್ ಜಾಮೀನು ಅರ್ಜಿ ಕೂಡ ವಜಾಗೊಂಡಿದೆ.