ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಇಂದು ಆರ್.ಆರ್.ನಗರದ ಪಟ್ಟಣಗೆರೆಯ ಶೆಡ್‌ಗೆ ಕರೆದೊಯ್ದ ಪೊಲೀಸರು ಸ್ಥಳ ಮಹಜರು ನಡೆಸಿದರು.
ಈ ಶೆಡ್ ಆರೋಪಿಗಳ ಪೈಕಿ ಓರ್ವನಾದ ವಿನಯ್ ಸೋದರ ಮಾವನ ಒಡೆತನದಲ್ಲಿದೆ. ಇಲ್ಲಿಗೆ ದರ್ಶನ್ ಹೋಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮಹಜರು ನಡೆಸಲಾಗಿದೆ.
ಆರೋಪಿಗಳನ್ನು ತಂಡಗಳಾಗಿ ವಿಂಗಡಿಸಿ, ಶೆಡ್‌ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಲಾಗಿದೆ.
ಬಿಗಿ ಭದ್ರತೆಯಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪಟ್ಟಣಗೆರೆ ಶೆಡ್‌ನ ಎಲ್ಲ ಕಡೆ ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಾಗಿದೆ. ಘಟನೆಯಲ್ಲಿ ಯಾರ ಪಾತ್ರ ಏನು? ಯಾರು ಸ್ಥಳದಲ್ಲಿ ಇದ್ದರು ಎಂದು ಒಬ್ಬೊಬ್ಬರ ಬಳಿಯಿಂದ ಮಾಹಿತಿ ಪಡೆಯಲಾಗಿದೆ. ಸ್ಥಳ ಮಹಜರಿನ ಪ್ರತಿ ಹಂತದಲ್ಲಿ ವಿಡಿಯೋ ಸೆರೆಹಿಡಿಯಲಾಗಿದೆ.