ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಲ್ಲಾ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದೀಗ ಪೊಲೀಸರು ಇನ್ಸ್ಟಾಗ್ರಾಮ್ ಸಹಾಯ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಮೃತ ರೇಣುಕಾಸ್ವಾಮಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದ ಎನ್ನಲಾಗಿದೆ. ಹೀಗಾಗಿ ಕಳುಹಿಸಿರುವ ಸಂದೇಶಗಳ ಮಾಹಿತಿ ನೀಡುವಂತೆ ಪೊಲೀಸರು ಇನ್ಸ್ಟಾಗ್ರಾಮ್‌ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮೃತ ರೇಣುಕಾಸ್ವಾಮಿಯ ಮೊಬೈಲ್ ಫೋನ್ ಇನ್ನೂ ಪತ್ತೆಯಾಗದ ಕಾರಣ ಆತ ಮೆಸೇಜ್ ಮಾಡಿದ್ದಾನೋ ಇಲ್ಲವೋ ಎನ್ನುವ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಪೊಲೀಸರು ಇನ್ಸ್ಟಾಗ್ರಾಮ್‌ಗೆ ಸಂದೇಶ ಕಳುಹಿಸಿದ್ದು ಮೆಸೇಜ್‌ಗಳ ಕಾಪಿ ಕೇಳಿದ್ದಾರೆ ಎನ್ನಲಾಗಿದೆ.