ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಪಿಪಿಯಾಗಿ (ವಿಶೇಷ ಸರ್ಕಾರಿ ಅಭಿಯೋಜಕ) ಪ್ರಸನ್ನ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಪ್ರಕರಣದಲ್ಲಿ ಸಂಬಂಧಪಟ್ಟ ವಿಚಾರಣಾ ಮತ್ತು ಜಿಲ್ಲಾ ಸತ್ರ ನ್ಯಾಯಾಲಯಗಳಲ್ಲಿ ರಾಜ್ಯ ಸರ್ಕಾರದ ಪರವಾಗಿ ಹಾಜರಾಗಲು ಹಾಗೂ ಪ್ರಕರಣವನ್ನು ನಡೆಸಲು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಜೂ.9 ರಂದು ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರನ್ನೂ ಇಂದು ಕೋರ್ಟ್‌ಗೆ ಹಾಜರುಪಡಿಸಲಾಗುತ್ತಿದೆ.