ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜೀಪ್ ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದರ ಬೆನ್ನಲ್ಲೇ ಕೊಲೆ ನಡೆದಿದ್ದ ಶೆಡ್ ಬಳಿ ನಟ ದರ್ಶನ್ ಜೀಪ್ ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆರ್.ಆರ್.ನಗರದ ಪಟ್ಟಣಗೆರೆ ಬಳಿಯ ಶೆಡ್ ನಲ್ಲಿ ಜೂನ್ 8ರಂದು ರಾತ್ರಿ ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿದೆ.

ಅಂದು ರಾತ್ರಿ 8ಗಂಟೆ ಸುಮಾರಿಗೆ ಶೆಡ್ ಗೆ ನಟ ದರ್ಶನ್ ಎಂಟ್ರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕಾರ್ಪಿಯೋ ವಾಹನವೊಂದರ ಹಿಂದೆ ಕೆಂಪು ಬಣ್ಣದ ಥಾರ್ ಜೀಪ್ ವೊಂದು ಶೆಡ್ ಗೆ ಆಗಮಿಸಿದ್ದು, ಬಳಿಕ ರಾತ್ರಿ 9:30ರ ಸುಮಾರಿಗೆ ಅದೇ ಜೀಪ್ ವಾಪಾಸ್ ತೆರಳಿರುವ ದೃಶ್ಯ ಸೆರೆಯಾಗಿದೆ. ಕೆಂಪು ಬಣ್ಣದ ಥಾರ್ ಜೀಪ್ ನಟ ದರ್ಶನ್ ಅವರದ್ದು ಎಂದು ಹೇಳಲಾಗುತ್ತಿದೆ.
ಇದರಿಂದ ರೇಣುಕಾಸ್ವಾಮಿ ಹತ್ಯೆ ನಡೆದಿದ್ದ ಸಂದರ್ಭದಲ್ಲಿ ನಟ ದರ್ಶನ್ ಕೂಡ ಘಟನಾ ಸ್ಥಳದಲ್ಲಿ ಇದ್ದರು ಎಂಬುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.

ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೆಜ್ ಕಳುಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರೇಣುಸ್ವಾಮಿ ಎಂಬಾತನನ್ನು ನಟ ದರ್ಶನ್ ಹಾಗೂ ಗ್ಯಾಂಗ್ ಬರ್ಬರವಾಗಿ ಹತ್ಯೆ ಮಾಡಿದ್ದು, ಪ್ರಕರಣ ಸಂಬಂಧ ದರ್ಶನ್ ಸೇರಿದಂತೆ 13 ಜನರನ್ನು ಪೊಲೀಸರು ಬಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!