ರೇಣುಕಾಸ್ವಾಮಿ ಮರ್ಡರ್‌ ಕೇಸ್‌: ತುಮಕೂರು ಜೈಲಿನಿಂದ ಮೂವರು ರಿಲೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು.

ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶ್ಯೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು.

ಸತತ 9 ದಿನಗಳಿಂದ ಶ್ಯೂರಿಟಿದಾರರು ಸಿಗದೇ ಪರದಾಟ ನಡೆಸಿದ್ದ ಕುಟುಂಬಸ್ಥರಿಗೆ ಮಂಗಳವಾರ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡಿದೆ. ಮಂಗಳವಾರ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ತಲುಪಿದ್ದು, ಬುಧವಾರ ಎ-16 ಆರೋಪಿ ಕೇಶವಮೂರ್ತಿ, ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!