ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗದ ಎ6 ಜಗ್ಗ ಅಲಿಯಾಸ್ ಜಗದೀಶ್ ಮತ್ತು ಎ7 ಅನಿ ಅಲಿಯಾಸ್ ಅನಿಲ್ ಅವರನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಚಿತ್ರದುರ್ಗ ಡಿಎಸ್ಪಿ ದಿನಕರ್ ಹಾಗೂ ಕಾಮಾಕ್ಷಿಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.