ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಮರ್ಡರ್ ಕೇಸ್ನ ತನಿಖೆ ನಡೆಯುತ್ತಿದ್ದು, ಒಂದೊಂದೇ ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಸ್ವಾಮಿ ಹತ್ಯೆ ಪ್ರಕರಣದ ಕಿಂಗ್ ಪಿನ್ ಪವಿತ್ರಾಗೌಡ ಅನ್ನೋದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ ಎನ್ನಲಾಗಿದೆ.
ಎ1 ಆರೋಪಿಯಾಗಿರುವ ಪವಿತ್ರಾಗೌಡಗೆ ಸದ್ಯ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರದ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪವಿತ್ರಾಗೌಡಗೆ ಸೇರಿ ಉಳಿದ ಆರೋಪಿಗಳು ಜುಲೈ 10ರ ವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಲಿದ್ದಾರೆ. ಬೆನ್ನಲ್ಲೇ ಪವಿತ್ರಾಗೌಡ ಅವರೇ ಕೃತ್ಯಕ್ಕೆ ಪ್ರಮುಖ ಕಾರಣ ಎಂಬುದನ್ನು ಪೊಲೀಸರು ಹೊಸ ರಿಮ್ಯಾಂಡ್ ಕಾಪಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.