ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪವಿತ್ರಾಗೌಡಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿಯ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ.
ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ.
ಪವಿತ್ರಾಗೌಡ ವಿರುದ್ಧ ಈ ಚಪ್ಪಲಿ ಪ್ರಬಲ ಸಾಕ್ಷಿಯಾಗಲಿದೆ. ಪಟ್ಟಣಗೆರೆ ಶೆಡ್‌ಗೆ ಹೋಗಿ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಆರೋಪ ನಟಿ ಮೇಲಿತ್ತು. ಈಗ ಅದೇ ಚಪ್ಪಲಿ ಮೇಲೆ ಕೊಲೆಯಾದ ವ್ಯಕ್ತಿಯ ರಕ್ತದ ಕಲೆ ಇರುವುದು ತಿಳಿದುಬಂದಿದೆ.