ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಕಣ್ಣೀರು ಹಾಕಿದ ರೇಣುಕಾಸ್ವಾಮಿ ತಂದೆ-ತಾಯಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತಂದೆ-ತಾಯಿ ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

ಮಾಜಿ ಸಚಿವ ಆಂಜನೇಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದ ಪೋಷಕರು ಸಿಎಂ ಮುಂದೆ ಅಳಲು ತೋಡಿಕೊಂಡರು. ಸಿಎಂ ಭೇಟಿ ವೇಳೆ ತಮ್ಮ ಮನೆಯ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡು ರೇಣುಕಾಸ್ವಾಮಿ ತಂದೆ-ತಾಯಿ ಕಣ್ಣೀರು ಹಾಕಿದರು.

ಸದ್ಯ ಪೊಲೀಸರ ತನಿಖೆ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ರೇಣುಕಾಸ್ವಾಮಿ ತಂದೆ-ತಾಯಿ, ಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದ್ರು. ಪೋಷಕರ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!