ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯ ಗಂಜಲಗೋಡು ಗ್ರಾಮದಲ್ಲಿ ವಿದ್ಯುತ್ ತಂತಿ ಸರಿಪಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
23 ವರ್ಷದ ಜೀವಿತ್ ಮೃತ ಯುವಕ. ದುರದೃಷ್ಟವಶಾತ್ ಭಾರೀ ಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿದೆ. ಈ ವೇಳೆ ಯುವಕ ಲೈನ್ ರಿಪೇರಿ ಮಾಡಲು ಯತ್ನಿಸಿದ್ದಾನೆ. ಏಕಾಏಕಿ ವಿದ್ಯುತ್ ಸ್ಪರ್ಶಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.