ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆಯೇ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ.
ಕೇಂದ್ರ ಸಚಿವ ಸಂಪುಟವು ಕಳೆದ ವಾರದ ನೂತನ ಕೃಷಿ ಕಾಯ್ದೆಯನ್ನು ರದ್ದುಗೊಳಿಸಲು ಒಪ್ಪಿಗೆ ನೀಡಿತ್ತು. ಇಂದಿನ ಅಧಿವೇಶನದಲ್ಲಿ ಮಸೂದೆ ನಿಷೇಧ ಕಾಯ್ದೆ ಮಂಡನೆಯಾಗಿದ್ದು, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಲ್ ಮಂಡಿಸಿದರು.
ಸದನದಲ್ಲಿ ಮಸೂದೆಯನ್ನು ಚರ್ಚಿಸಲು ಕಾಂಗ್ರೆಸ್ ಒತ್ತಾಯಿಸಿದ್ದು, ಲೋಕಸಭೆ ಕಲಾಪಗಳನ್ನು ಮಧ್ಯಾಹ್ನ 2ವರೆಗೆ ಮುಂದೂಡಲು ನಿರ್ಣಯಿಸಲಾಯಿತು.
The Farm Laws Repeal Bill, 2021 passed by Lok Sabha amid ruckus by Opposition MPs
Leader of Congress Party in Lok Sabha Adhir Ranjan Chowdhury demands discussion on the Bill in the House pic.twitter.com/2QAyOAVGq1
— ANI (@ANI) November 29, 2021