ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಮನೋರಮಾ ನ್ಯೂಸ್ನ ಮುಖ್ಯ ವರದಿಗಾರ ವಿಪಿನ್ ಚಂದ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೊರೋನಾ ಎರಡನೇ ಅಲೆ ವೇಳೆಯೂ ಕೆಲಸ ಮಾಡುತ್ತಿದ್ದ ವಿಪಿನ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮನೆಯಲ್ಲೇ ಕ್ವಾರೆಂಟೀನ್ ಆಗಿದ್ದರು. ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆಗೆ ಸ್ಪಂದಿಸದೆ ವಿಪಿನ್ ಅವರು ಮೃತಪಟ್ಟಿದ್ದಾರೆ.