ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಪುತ್ರ ರಾಮನಗೌಡ ಪಾಟೀಲ್ ಅಧ್ಯಕ್ಷರಾಗಿರುವ ಸಿದ್ದಸಿರಿ ಮಲ್ಟಿ ಸ್ಟೇಟ್ ಮಲ್ಟಿ ಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಥವಾ ಆದಾಯ ತೆರಿಗೆ ಇಲಾಖೆ (ಐಟಿ) ಯಾವುದೇ ದಾಳಿ ನಡೆಸಿಲ್ಲ. ಸೊಸೈಟಿಯಲ್ಲಿರುವ ಗ್ರಾಹಕರ ಹಣ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೊಸೈಟಿ ಮೇಲೆ ಇಡಿ ದಾಳಿ ನಡೆದಿದೆ ಎಂಬ ಸುದ್ದಿಗಳನ್ನು ರಾಜಕೀಯ ವಿರೋಧಿಗಳು ಹಬ್ಬಿಸಿರುವ ಸುಳ್ಳು ವದಂತಿಗಳು. ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಸಾಬೀತುಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಸವಾಲು ಹಾಕಿದರು.
5 ಲಕ್ಷದಿಂದ ಸಾವಿರಾರು ಕೋಟಿ ವಹಿವಾಟು
ಸಿದ್ದಸಿರಿ ಸಹಕಾರಿ ಸಂಸ್ಥೆಯ ಬೆಳವಣಿಗೆಯ ಕುರಿತು ಮಾಹಿತಿ ನೀಡಿದ ಯತ್ನಾಳ್, ಆರಂಭದಲ್ಲಿ ಕೇವಲ ಐದು ಲಕ್ಷ ರೂಪಾಯಿ ಬಂಡವಾಳದೊಂದಿಗೆ ಕಾರ್ಯಾರಂಭ ಮಾಡಿದ ಸಂಸ್ಥೆ ಅಲ್ಪಾವಧಿಯಲ್ಲೇ ದೊಡ್ಡ ಮಟ್ಟಕ್ಕೆ ಬೆಳೆದಿದೆ ಎಂದರು. 2025ರ ವೇಳೆಗೆ ಸಂಸ್ಥೆಯ ವಹಿವಾಟು 6,140 ಕೋಟಿ ರೂಪಾಯಿಗೆ ತಲುಪಿದ್ದು, ರಾಜ್ಯ ಸಹಕಾರ ಸಂಘದ ವ್ಯಾಪ್ತಿಯಿಂದ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರ್ಪಡೆಯಾಗಿ ಮಲ್ಟಿ ಸ್ಟೇಟ್ ಸೊಸೈಟಿಯಾಗಿ ರೂಪಾಂತರಗೊಂಡಿದೆ ಎಂದು ವಿವರಿಸಿದರು.
ಇದನ್ನೂ ಓದಿ:
ನೋಟಿಸ್ಗೆ ಈಗಾಗಲೇ ಉತ್ತರ
ಕೇಂದ್ರ ಸಹಕಾರ ಸಂಘಗಳ ರಿಜಿಸ್ಟ್ರಾರ್ ಕಚೇರಿಯಿಂದ ಆಗಸ್ಟ್ 14ರಂದು ಆಡಿಟರ್ ಸಹಿ ಮತ್ತು ದಾಖಲೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಕೇಳಿ ನೋಟಿಸ್ ಬಂದಿತ್ತು. ಇದಕ್ಕೆ ಸೆಪ್ಟೆಂಬರ್ 4ರಂದೇ ಇ-ಮೇಲ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಉತ್ತರ ನೀಡಲಾಗಿದೆ ಎಂದು ತಿಳಿಸಿದರು.



