ನ್ಯಾ. ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ವರದಿ ಬೆಂಗಳೂರು:

ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ. ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜ್, ನಸೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯ ಯು.ಬಿ.ವಂಕಟೇಶ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!