ಬೀದರ್ ನ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ

ಹೊಸದಿಗಂತ, ಬೀದರ್:

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನಂದಿನಗರ ಆವರಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ|| ಕೆ.ಸಿ. ವೀರಣ್ಣರವರು ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿ ವೃಂದದವರು, ವಿಶ್ವವಿದ್ಯಾಲಯ ಹಾಗೂ ಮಹಾವಿದ್ಯಾಲಯದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ|| ಕೆ.ಸಿ. ವೀರಣ್ಣನವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಭಾರತವು ಆಗಸ್ಟ್ 15, 1947 ರಂದು ಬ್ರಿಟಿಷ್ ಆಡಳಿತದಿಂದ ಸ್ವಾತಂತ್ರ್ಯವನ್ನು ಪಡೆಯಿತು. ಆ ಸಮಯದಲ್ಲಿ ದೇಶಕ್ಕೆ ತನ್ನದೆ ಆದ ಶಾಶ್ವತ ಸಂವಿಧಾನ ಇರಲಿಲ್ಲ. ಆಗಸ್ಟ್ 29, 1947 ರಂದು ಡಾ. ಬಿ. ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿನ ಸಮಿತಿಯು ಸಂವಿಧಾನದ ಕರಡು ಪ್ರತಿಯನ್ನು ತಯಾರಿಸಿ ನವೆಂಬರ್ 4, 1947 ರಂದು ಶಾಸನ ಸಭೆಯಲ್ಲಿ ಮಂಡಿಸಿತ್ತು. ನವೆಂಬರ್ 26, 1949 ರಂದು ಅಂಗಿಕರೀಸಲ್ಪಟ್ಟು, ಅನೇಕ ಪರಿಶೀಲನೆ ಮತ್ತು ತಿದ್ದುಪಡಿಗಳ ನಂತರ ಜನವರಿ 26, 1950 ರಂದು ಭಾರತದ ಸಂವಿಧಾನ ಜಾರಿಗೆ ಬಂದಿತ್ತು.

ಈ ವರ್ಷದ ಗಣರಾಜ್ಯೋತ್ಸವದ ವಿಶೇಷವೆನೆಂದರೆ, ಫ್ರಾನ್ಸ ದೇಶದ ಅಧ್ಯಕ್ಷರಾದ ಇಮಾನವೇಲ್ ಮೇಕ್ರೋನ್ ಅವರು ಮುಖ್ಯ ಅತಿಥಿಯಾಗಿ ಇಂದು ಭಾರತಕ್ಕೆ ಆಗಮಿಸಿ, ರಾಜಪಥದಲ್ಲಿ ನಡೆಯುತ್ತಿರುವ ಪರೇಡ್‍ಗೆ ಸಾಕ್ಷಿಯಾಗಿದ್ದಾರೆ. ವಿಶ್ವವಿದ್ಯಾಲಯದ ಮುಖ್ಯ ಗುರಿಯು ಪಶುವೈದ್ಯಕೀಯ, ಹೈನುಗಾರಿಕೆ, ಮೀನುಗಾರಿಕೆ ಮತ್ತು ಸಂಬಂಧಿಸಿದ ಕ್ಷೇತ್ರಗಳಲ್ಲಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಲ್ಲಿ ನಾಯಕತ್ವವನ್ನು ಒದಗಿಸಿ, ಸಾಮಾಜಿಕ ಮತ್ತು ತಾಂತ್ರಕತೆಗನುಗುಣವಾಗಿ ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿದೆ. ವಿಶ್ವವಿದ್ಯಾಲಯವು ಉತ್ತಮ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರನ್ನು ಗುರುತಿಸಿ ವಿಶ್ವವಿದ್ಯಾಲಯದ ಮಟ್ಟದಲ್ಲಿ ಅವರ ಸೇವೆಯನ್ನು ಪರಿಗಣಿಸಿ ಸನ್ಮಾನಿಸಲಾಗಿದೆ ಎಂದು ತಿಳಿಸಿದರು.

ನಮ್ಮ ವಿಶ್ವವಿದ್ಯಾಲಯವು ಬರದಂತಹ ಪರಿಸ್ಥಿತಿಯಲ್ಲಿ ರೈತರ ಅಭಿವೃದ್ಧಿಗಾಗಿ ಶ್ರಮಿಸುತ್ತ ಹವಾಮಾನ ಬದಲಾವಣೆ, ಹಾಲಿನ ಉತ್ಪನ್ನಗಳ ತಯಾರಿಕೆ, ದೇಶಿ ತಳಿ ಜಾನುವಾರುಗಳ ಅಭಿವೃದ್ಧಿ, ಮೀನು ಸಂಪತ್ತು ಅಭಿವೃದ್ಧಿಯತ್ತ ಗಮನ ಹರಿಸಬೇಕೆಂದು ಹೇಳಿದರು.

ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕ್ರೀಡಾಂಗಣದ ಆವರಣದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಂದ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಬೀದರ ಪಶುವೈದ್ಯಕೀಯ ಮಹಾವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿಗಳು ದೇಶ ಭಕ್ತಿಗೀತೆ ಹಾಡುವ ಮುಖಾಂತರ, ಕಾರ್ಯಕ್ರಮಕ್ಕೆ ಹೆಚ್ಚಿನ ಶೋಭೆ ತಂದುಕೊಟ್ಟರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!