ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ 76ನೇ ಗಣರಾಜ್ಯೋತ್ಸವದ ಆಚರಣೆ ಸಂಭ್ರಮದಿಂದಲೇ ನೆರವೇರಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.
ನಂತರ ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿ, ಪರೇಡ್ ವೀಕ್ಷಿಸಿದ ರಾಜ್ಯಪಾಲರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.