ಹೊಸದಿಗಂತ, ವಿಜಯಪುರ:
ಗುಮ್ಮಟ ನಗರಿ ವಿಜಯಪುರದಲ್ಲಿ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸಲಾಯಿತು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಎಸ್ಪಿ ಋಷಿಕೇಶ ಸೋನಾವಣೆ ಸೇರಿದಂತೆ, ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.