Sunday, July 3, 2022

Latest Posts

ಭಾರತದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಅಮೆರಿಕ ಶ್ವೇತಭವನದಿಂದ ಶುಭಾಷಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿಂದು 73 ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ಅಮೆರಿಕ ಭಾರತದ ನಾಗರಿಕರಿಗೆ ಶುಭಾಶಯ ಕೋರಿದೆ.ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಎರಡೂ ರಾಷ್ಟ್ರಗಳು ಜವಾಬ್ದಾರಿಯನ್ನು ಹಂಚಿಕೊಂಡಿವೆ ಎಂದು ಅಭಿಪ್ರಾಯಪಟ್ಟಿದೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತದ ಸಂವಿಧಾನವನ್ನು ಅಂಗೀಕರಿಸಿದ ದಿನ ಗಣರಾಜ್ಯೋತ್ಸವವನ್ನು ಗೌರವಿಸುತ್ತೇವೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದೊಂದಿಗೆ ಈ ಸಮಯದಲ್ಲಿ ಜೊತೆಗೆ ಇರುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss