Tuesday, October 3, 2023

Latest Posts

‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’: ಬದಲಾಗುತ್ತಾ ದೇಶದ ಹೆಸರು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇಂದ್ರ ಸರ್ಕಾರವು ದೇಶದ ಹೆಸರನ್ನು ಬದಲಿಸಲು ಚಿಂತನೆ ನಡೆಸಿದ್ದು, `ಇಂಡಿಯಾ’ ಬದಲಿಗೆ `ರಿಪಬ್ಲಿಕ್‌ ಆಫ್‌ ಭಾರತ್‌’ (Republic Of Bharat) ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇದೀಗ ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.

ರಿಪಬ್ಲಿಕ್‌ ಆಫ್‌ ಭಾರತ್‌ ಎಂಬ ಪದವನ್ನು ಉಲ್ಲೇಖಿಸಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. “ರಿಪಬ್ಲಿಕ್‌ ಆಫ್‌ ಭಾರತ್‌ (ಭಾರತ್ ಗಣರಾಜ್ಯ) – ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಎಂದು ಬರೆದುಕೊಂಡಿದ್ದಾರೆ.

ಜಿ20 ಸಭೆಗೆ ಬರುವ ಗಣ್ಯರಿಗೆ ಸೆಪ್ಟೆಂಬರ್ 9 ರಂದು ರಾಷ್ಟ್ರಪತಿ ಭವನದಲ್ಲಿ ಬೃಹತ್ ಔತಣಕೂಟ ಏರ್ಪಡಿಸಲಾಗಿದೆ. ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ತಮ್ಮ ಹುದ್ದೆಯನ್ನು ಉಲ್ಲೇಖಿಸಿದ್ದಾರೆ.

ಕೇಂದ್ರದ ಮೋದಿ ಸರ್ಕಾರವು ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ, ಇದನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ದೃಢಪಡಿಸಿದ್ದಾರೆ.ಮೂಲಗಳ ಪ್ರಕಾರ, ಈ ಸಂಸತ್ ಅಧಿವೇಶನದಲ್ಲೇ ದೇಶದ ಹೆಸರನ್ನು ಇಂಡಿಯಾದ ಬದಲು ಭಾರತ್ ಎಂದು ಬದಲಾಯಿಸುವ ಅಧಿಕೃತ ಘೋಷಣೆ ಮಾಡಬಹುದು. ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಲಾಗಿಲ್ಲ,

ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ದೇಶವನ್ನು `ಇಂಡಿಯಾ’ (India) ಬದಲು `ರಿಪಬ್ಲಿಕ್‌ ಆಫ್‌ ಭಾರತ್‌’ ಎಂದು ಕರೆಯಬೇಕು ಎಂಬುದಾಗಿಸಲಹೆ ನೀಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!