ಆಲೂರಿನಲ್ಲಿ ಡಯಾಲಿಸಿಸ್ ಘಟಕ ಸ್ಥಾಪನೆಗೆ ಮನವಿ

ಹೊಸದಿಗಂತ ವರದಿ ಆಲೂರು :

ಆಲೂರು ಪಟ್ಟಣದ ತಾಲ್ಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಸ್ಥಾಪನೆ,ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ಭರ್ತಿ,ಹಾಗೂ ರೇಡಿಯೊಲಿಜಿಸ್ಟ್ ಕೊರತೆ ಸರಿದೂಗಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ರಣ್ಧೀಪ್ ಅವರನ್ನು ಶಾಸಕ ಸಿಮೆಂಟ್ ಮಂಜು ಅವರು ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ.

ಮನವಿಗೆ ಸ್ಪಂದಿಸಿರುವ ಆಯುಕ್ತರು ಡಯಾಲಿಸಿಸ್ ಘಟಕ ಸ್ಥಾಪನೆಗೆ ಅನುಮತಿ ಹಾಗೂ ಸಿಬ್ಬಂದಿಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು. ಆಲೂರು-ಸಕಲೇಶಪುರ ಆಸ್ಪತ್ರೆ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಸದ್ಯದಲ್ಲಿ ರೇಡಯೊಲಜಿಸ್ಟ್ ಗಳನ್ನು ನೇಮಕ ಮಾಡಲಾಗುವುದು ಎಂದು ಬರವಸೆ ನೀಡಿದ್ದಾರೆ ಎಂದು ಸಿಮೆಂಟ್ ಮಂಜು ತಿಳಿಸಿದರು.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಶಾಸಕರು ಆಲೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ಡಯಾಲಿಸಿಸ್ ಘಟಕ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸಿದ್ದು ಕಾಮಗಾರಿ ಹಂತದಲ್ಲಿರುವ ಕೊಠಡಿಗಳನ್ನು ಅದಷ್ಟು ಬೇಗ ಪೂರ್ಣಗೊಳಿಸಿ ಡಯಲಿಸಿಸ್ ಘಟಕ ಸ್ಥಾಪನೆ ಅನುವು ಮಾಡಕೊಡಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದ್ದರು ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಕೂಡ ತರಾತುರಿಯಲ್ಲಿ ಕಾಮಗಾರಿ ಕೆಲಸ ಮಾಡುತ್ತಿದ್ದು ಎಲ್ಲವೂ ಅಂದುಕೊಂಡಂತೆ ಅದರೆ ಕೇವಲ ಒಂದು ತಿಂಗಳೊಳಗೆ ಡಯಾಲಿಸಿಸ್ ಘಟಕವನ್ನು ಸಾರ್ವಜನಿಕರಿಗೆ ಅರ್ಪಿಸಲಿದ್ದಾರೆ.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!