Thursday, July 7, 2022

Latest Posts

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದ ಶಿಕ್ಷಕನ ಅಮಾನತಿಗೆ ಆಗ್ರಹ

ಹೊಸದಿಗಂತ ವರದಿ, ಕಲಬುರಗಿ
ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷೆ ವೇಳೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿರುವ ಸಕಾ೯ರಿ ಉರ್ದು ಶಾಲೆಯ ಶಿಕ್ಷಕ ಮೊಹಮ್ಮದ್ ಅಲಿ ಅವರನ್ನು ಅಮಾನತು ಮಾಡಬೇಕೆಂದು ಶ್ರೀರಾಮಸೇನೆ ಆಗ್ರಹಿಸಿದೆ.
ಬುಧವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ದೂರು ಸಲ್ಲಿಸಿದ ಶ್ರೀರಾಮ ಸೇನೆ ತಾಲೂಕು ಅಧ್ಯಕ್ಷ  ನಿಂಗನಗೌಡ ಪಾಟೀಲ್ ಮಾತನಾಡಿ, ಶಿಕ್ಷಕ ಎಸ್ಎಸ್ಎಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡುವ ಮೂಲಕ ನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಿದ್ಎಂದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಶಿಕ್ಷಕ ಮೊಹಮ್ಮದ್ ಅಲಿಯನ್ನು ಕೂಡಲೇ ಅಮಾನತ ಮಾಡಬೇಕೆಂದು ಆಗ್ರಹಿಸಿದರು.
ಜಿಲ್ಲಾಧಿಕಾರಿಗೆ ಮನವಿ:
ಇನ್ನೂ ಈ ವಿಚಾರಕ್ಸಂಕೆ ಬಂಧಿಸಿದಂತೆ ಶ್ರೀ ರಾಮ ಸೇನೆಯ ಜಿಲ್ಲಾ ವಿದ್ಯಾರ್ಥಿ ಘಟಕದ ವತಿಯಿಂದ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ಘಟಕದ ಅಧ್ಯಕ್ಷ ಮಹೇಶ್ ಕೆಂಭಾವಿ, ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದ ಸಕಾ೯ರಿ ಶಾಲೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಮ ಸೇನೆಯ ವತಿಯಿಂದ ʼಚಲೋ ಇಜೇರಿʼ ಎಂಬ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಹೇಶ್ ಗೊಬ್ಬುರ, ರಾಕೇಶ್ ಜಮಾದಾರ, ಅಖಿಲೇಶ್ ಒಡೆಯರ್, ನಾಗೇಶ್ ಆಡೆ, ಶಿವಕುಮಾರ್ ಹಾಗರಗಿ, ಶಿವಾನಂದ ಅಷ್ಟಗಿ ಮತ್ತಿತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss