ಅಖಿಲ ಭಾರತ ವೀರಶೈವ ಮಹಾಸಭಾ ಭವನಕ್ಕೆ ಜಮೀನು ಕೋರಿ ಸಿಎಂಗೆ ಮನವಿ

ಹೊಸದಿಗಂತ ವರದಿ, ಬಳ್ಳಾರಿ:

ಅಖಿಲ ಭಾರತ ವೀರಶೈವ ಮಹಾಸಭಾ ಭವನ ನಿರ್ಮಾಣಕ್ಕೆ ಎರಡು ಎಕರೆ ಜಮೀನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಮನವಿ ಸಲ್ಲಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ಹಾಗೂ ಜಿಲ್ಲಾಧ್ಯಕ್ಷ ಚಾನಾಳ್ ಶೇಖರ್ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಈ ಕುರಿತು ಮುಖ್ಯಮಂತ್ರಿ ‌ಬಸವರಾಜ್ ಬೊಮ್ಮಾಯಿ ಅವರು, ಮಹಾಸಭಾ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೂಡಲೇ ಕಾರ್ಯದರ್ಶಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಸೂಚನೆ ‌ನೀಡುವೆ ಎಂದು ಭರವಸೆ ನೀಡಿದ್ದಾರೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಚಾನಾಳ್ ಶೇಖರ್ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here