ಬೀದರ್ ಮಸೀದಿ ಪ್ರಕರಣ: ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರಗೆ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬೀದರ ನಗರದಲ್ಲಿ ನಡೆದ ದಸರಾ ಉತ್ಸವ ಸಮಯದಲ್ಲಿ ಅನಗತ್ಯ ವಿವಾದ ಸೃಷ್ಟಿಸಲಾಗಿದೆ. ಎಲ್ಲಾ ರೀತಿಯ ಪರವಾನಿಗೆ ಪಡೆದ ಬಳಿಕವೇ ಒಳಕೊಟಿ ಭವಾನಿ ದೇವಸ್ಥಾನದ ಪಲ್ಲಕ್ಕಿಯನ್ನು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಂತಹ ಪದ್ಧತಿಯಂತೆ ಪೂಜೆ ಸಲ್ಲಿಸಲಾಗಿದೆ. ಆದರೆ ಕೆಲವು ಮುಸ್ಲಿಂ ಮತಾಂಧರು ವಿವಾದ ಸೃಷ್ಟಿಸುವ ದುರುದ್ದೇಶದಿಂದಲೇ ಸಾವಿರಾರು ಜನರನ್ನು ರಸ್ತೆಗಿಳಿಯುವಂತೆ ಮಾಡಿ ಸಾರ್ವಜನಿಕವಾಗಿ ಹಿಂದೂಗಳ ಮನೆಗೆ ನುಗ್ಗಿ ಹೊಡಿತೇವೆ ಎಂದು ಬೆದರಿಕೆ ಹಾಕಿ ಗಲಭೆ ಸೃಷ್ಟಿಸುವ ಹುನ್ನಾರ ನಡೆಸಿದ್ದಾರೆ.
ಈ ಸಂಚಿನ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಹಾಗೂ ಭವಾನಿ ತಾಯಿಯ ಭಕ್ತರುಗಳ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಬೀದರ್‌ ನಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ಬೀದರ ಬಿಜೆಪಿ ಜಿಲ್ಲಾಧ್ಯಕ್ಷರ ಶಿವಾನಂದ ಮಂಠಾಳಕರ್, ಬೀದರ ಜಿಲ್ಲೆಯ ಬಿಜೆಪಿ ಜಿಲ್ಲಾ ಸಹ ಪ್ರಭಾರಿ ವಿದ್ಯಾಸಾಗರ್ ಶಾಬದಿ ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!