SHOCKING | ಬಿಹಾರದಿಂದ ಕಳ್ಳಸಾಗಾಣಿಕೆಯಾಗುತ್ತಿದ್ದ 95 ಮಕ್ಕಳ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಿಹಾರದಿಂದ ಉತ್ತರ ಪ್ರದೇಶಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳನ್ನು ಅಯೋಧ್ಯೆಯಲ್ಲಿ ರಕ್ಷಿಸಲಾಗಿದೆ.
ಮಕ್ಕಳ ಆಯೋಗದ ಅಧಿಕಾರಿಗಳು ಮಕ್ಕಳನ್ನು ರಕ್ಷಿಸಿದ್ದು, ಮಕ್ಕಳ ಸುರಕ್ಷತೆ ಕಾಯ್ದುಕೊಳ್ಳಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಅಯೋಧ್ಯೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೇಶ್ ಅವಸ್ತಿ, ಯುಪಿ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚತುರ್ವೇದಿ ಅವರಿಂದ ಮಾಹಿತಿ ಪಡೆದ ಸಿಡಬ್ಲ್ಯೂಸಿ ಸದಸ್ಯರು ಮಕ್ಕಳನ್ನು ರಕ್ಷಿಸಿದ್ದಾರೆ. ಸುಚಿತ್ರಾ ಚತುರ್ವೇದಿಯವರು ಕರೆ ಮಾಡಿ, ಬಿಹಾರದಿಂದ ಅಪ್ರಾಪ್ತ ಮಕ್ಕಳನ್ನು ಅಕ್ರಮವಾಗಿ ಸಹರಾನ್‍ಪುರಕ್ಕೆ ಸಾಗಿಸಲಾಗುತ್ತಿದೆ. ಅವರು ಗೋರಖ್‍ಪುರದಲ್ಲಿದ್ದಾರೆ ಮತ್ತು ಅಯೋಧ್ಯೆಯ ಮೂಲಕ ಹೋಗುತ್ತಾರೆ ಎಂದು ಮಾಹಿತಿ ನೀಡಿದರು. ಮಾಹಿತಿ ಬಂದ ತಕ್ಷಣ ಮಕ್ಕಳನ್ನು ರಕ್ಷಿಸಿದ್ದೇವೆ ಅವರು ತಿಳಿಸಿದ್ದಾರೆ.

ಸಾಗಿಸುತ್ತಿದ್ದವರ ಬಳಿ ಯಾವುದೇ ಪತ್ರ ಅಥವಾ ದಾಖಲೆ ಇಲ್ಲ, ಮಕ್ಕಳ ಪೋಷಕರು ಯಾರು ಎಂಬ ಮಾಹಿತಿಯೂ ಇಲ್ಲ. ಸದ್ಯ ಮಕ್ಕಳ ಪೋಷಕರನ್ನು ಸಂಪರ್ಕಿಸುವ ಪ್ರಯತ್ನ ಮಾಡಲಾಗುತ್ತಿದೆ. ನಾಲ್ಕು ವರ್ಷದ ಮಕ್ಕಳೂ ಕೂಡ ಇದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!