ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಘಸ್ಫೋಟದ ನಂತರ ಉತ್ತರಾಖಂಡ್‌ನ ಹಿಮಾಲಯದ ಕೇದಾರನಾಥ ದೇಗುಲಕ್ಕೆ ತೆರಳುವ ಚಾರಣ ಮಾರ್ಗದಲ್ಲಿ ಸಿಲುಕಿರುವ ಯಾತ್ರಾರ್ಥಿಗಳ ರಕ್ಷಣಾ ಕಾರ್ಯಾಚರಣೆ ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. 10,500 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಕೆಲವರನ್ನು ವಾಯುಪಡೆಯ ಹೆಲಿಕಾಪ್ಟರ್‌ಗಳ ಮೂಲಕ ರವಾನಿಸಲಾಗಿದೆ. ಸುಮಾರು 1,300 ಯಾತ್ರಾರ್ಥಿಗಳು ಕೇದಾರನಾಥ, ಭೀಮಾಲಿ ಮತ್ತು ಗೌರಿಕುಂಡ್‌ನಲ್ಲಿ ಸಿಲುಕಿಕೊಂಡಿದ್ದು, ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಭಾರತೀಯ ವಾಯುಪಡೆಯ ಚಿನೂಕ್ ಮತ್ತು ಎಂಐ17 ಹೆಲಿಕಾಪ್ಟರ್‌ಗಳು ಶುಕ್ರವಾರ ಈ ಪ್ರದೇಶದಿಂದ ಕೆಲವು ಯಾತ್ರಾರ್ಥಿಗಳನ್ನು ವಿಮಾನದಲ್ಲಿ ಕರೆದೊಯ್ದವು.