Thursday, July 7, 2022

Latest Posts

ಅನಾಥ ಮಹಿಳೆಯನ್ನು ರಕ್ಷಿಸಿದ ಕರವೇ ಕಾರ್ಯಕರ್ತರು

ಹೊಸ ದಿಗಂತ ವರದಿ, ಮಡಿಕೇರಿ:

ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಪಂಚಾಯಿತಿ ವ್ಯಾಪ್ತಿಯ ಬೀಟಿಕಟ್ಟೆ ಗ್ರಾಮದಲ್ಲಿ ಅನಾಥವಾಗಿ ತಿರುಗಾಡುತ್ತಿದ್ದ ಮಹಿಳೆಯನ್ನು ಕರವೇ ಕಾರ್ಯಕರ್ತರು ರಕ್ಷಣೆ ಮಾಡಿ ಶ್ರೀಶಕ್ತಿ ಅನಾಥಾಶ್ರಮಕ್ಕೆ ದಾಖಲಿಸಿದ್ದಾರೆ.
ಗೌಡಳ್ಳಿ ಪಂಚಾಯಿತಿ ವ್ಯಾಪ್ತಿಯ ಬೀಟಿಕಟ್ಟೆ ಗ್ರಾಮದಲ್ಲಿ ಸುಮಾರು ಒಂದು ವಾರದಿಂದ ತಿರುಗಾಡುತ್ತಿದ್ದ ಮಹಿಳೆಯ ಕುರಿತು ಶಿಲ್ಪಾ ಮಂಜುನಾಥ್ ಆಚಾರ್ಯ ಅವರು ಕರವೇ ತಾಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಾ ಅವರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಫ್ರಾನ್ಸಿಸ್ ಡಿಸೋಜಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್‍ನ ಆಡಳಿತಾಧಿಕಾರಿ ಪ್ರಭಾವತಿ ಅವರನ್ನು ಸಂಪರ್ಕಿಸಿ, ಶ್ರೀ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿದರು.
ಅನಾಥ ಮಹಿಳೆಯು ಮಾನಸಿಕ ಅಸ್ವಸ್ಥರಂತೆ ಕಂಡು ಬಂದಿದ್ದು, ಮಹಿಳೆಗೆ ಚಿಕಿತ್ಸೆ ನೀಡಲು ಗೌಡಳ್ಳಿ ಪಂ. ಸದಸ್ಯ ವೆಂಕಟೇಶ್ ಹಾಗೂ ಅಭಿವೃದ್ಧಿ ಅಧಿಕಾರಿ ಲಿಖಿತಾ ಹಾಗೂ ಶಕ್ತಿ ಆಶ್ರಮದ ವ್ಯವಸ್ಥಾಪಕ ಸತೀಶ್ ಸಹಕಾರ ನೀಡಿದ್ದು, ಕರವೇ ಕಾರ್ಯಕರ್ತರಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಾ, ಬೀಟಿಕಟ್ಟೆ ಗ್ರಾಮದ ಚಂದ್ರಪ್ಪ ಮತ್ತು ಕಿಸಾನ್ ರೈ ಪಾಲ್ಗೊಂಡಿದ್ದರು. ಹೆಚ್ಚಿನ ಮಾಹಿತಿಗೆ 9449255831, 9686095831 ಸಂಪರ್ಕಿಸಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss