ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಸಿಎಂ ಕಚೇರಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸರ್ಕಾರದ ಸಿವಿಲ್​ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತದಾನ ಒಂದು ದಿನ ಬಾಕಿ ಇರುವಾಗಲೇ ಮೀಸಲಾತಿ ವಿಚಾರ ಮುನ್ನಲೆಗೆ ಬಂದಿದ್ದು, ಕಾಂಗ್ರೆಸ್​ ಸರ್ಕಾರವನ್ನು ಧರ್ಮ ಸಂಕಷ್ಟಕ್ಕೆ ಸಿಲುಕಿಸಿತ್ತು. ಈ ಚರ್ಚೆ ಮತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುವುದನ್ನು ಮನಗಂಡ ಕಾಂಗ್ರೆಸ್​ ಸರ್ಕಾರ ಕೂಡಲೆ ಎಚ್ಚೆತ್ತು ಸ್ಪಷ್ಟನೆ ನೀಡಿದೆ.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ ಇದೆ. ಆದರೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ. ಆದರೆ, ಶೇ.4ರಷ್ಟು ಮೀಸಲಾತಿಗಾಗಿ ಅಲ್ಪಸಂಖ್ಯಾತ ಶಾಸಕರು, ಸಚಿವರು ನೀಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿ, ಕಡತ ಮಂಡಿಸಲು ಸೂಚಿಸಿದ್ದಾರೆ. ಹೀಗಾಗಿ ಸರ್ಕಾರ ದ್ವಂದ್ವತೆಯಿಂದ ಕೂಡಿದೆ ಎಂಬ ಅನುಮಾನ ವ್ಯಕ್ತವಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!