ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ನಂತರ ನಿವೃತರಾಗುವ ಅಗ್ನಿವೀರರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲಾಗುವುದು ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಘೋಷಿಸಿದ್ದಾರೆ.
ಕಾರ್ಗಿಲ್ ವಿಜಯ ದಿವಸದ 25ನೇ ವಾರ್ಷಿಕೋತ್ಸವದ ವೇಳೆಯಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆ. ಅಗ್ನಿವೀರರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಕಾನೂನಿನಲ್ಲಿ ಅಗತ್ಯ ಬದಲಾವಣೆ ತರಲಾಗುವುದು ಎಂದು ತಿಳಿಸಿದ್ದಾರೆ.
ನಾವು ಸರ್ಕಾರಿ ಸೇವೆಗಳಲ್ಲಿ ಮೀಸಲಾತಿ ನೀಡಲು ಕಾನೂನಿನಲ್ಲಿ ಬೇಕಾದ ಬದಲಾವಣೆಗಳನ್ನು ಮಾಡಲಿದ್ದೇವೆ. ಇದಕ್ಕಾಗಿ ಕಾಯ್ದೆ ರೂಪಿಸಲಿದ್ದೇವೆ. ಅಗ್ನಿವೀರರ ಕೌಶಲ್ಯವನ್ನು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಳಸಿಕೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.
ಹುತಾತ್ಮರ ಕುಟುಂಬಗಳಿಗೆ ನೀಡುವ ಪರಿಹಾರ ನಿಧಿಯನ್ನು ₹10 ಲಕ್ಷದಿಂದ ₹50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಯಾವ ಬಲಿದಾನವು ದೇಶದ ಗಡಿ ಕಾಯುವ ಯೋಧರ ಬಲಿದಾನಕ್ಕಿಂತ ದೊಡ್ಡದಲ್ಲ. ಅವರ ಬಲಿದಾನಕ್ಕೆ ಯಾವ ಅನುದಾನ ಅಥವಾ ಗೌರವವೂ ಸಾಕಾಗುವುದಿಲ್ಲ ಎಂದು ಹೇಳಿದ್ದಾರೆ.