ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಾಧಾರಿತವಾಗಿ ಮೀಸಲಾತಿ ನೀಡಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪದೇ ಪದೇ ಉಲ್ಲಂಘಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ವಸತಿ ಯೋಜನೆಯಡಿ ಮುಸ್ಲಿಂರಿಗೆ ಪ್ರತ್ಯೇಕವಾಗಿ ಶೇಡಕ 15ರಷ್ಟು ಮೀಸಲಾತಿ ನೀಡಿರುವುದೂ ಸಂಪೂರ್ಣ ಸಂವಿಧಾನ ವಿರೋಧಿ ಎಂದು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ದೂರಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದು, ಸರ್ಕಾರದ ವಿರುದ್ಧ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಸಿದ್ದಾರೆ.