Tuesday, December 23, 2025

I.N.D.I.A ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85%ಗೆ ಏರಿಕೆ: ತೇಜಸ್ವಿ ಯಾದವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು 85%ಗೆ ಏರಿಕೆ ಮಾಡುವುದಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರದ ಮೋತಿಹಾರಿಯಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಒಂದಾಗಬೇಕು ಎಂದು ಹೇಳಿದರು.

ಇದೇ ವೇಳೆ ಮೀಸಲಾತಿ ಸೌಲಭ್ಯಗಳನ್ನು ಹೆಚ್ಚಿಸುವ ತಮ್ಮ ಪಕ್ಷದ ಭರವಸೆಯನ್ನು ಪುನರುಚ್ಛರಿಸಿದ ತೇಜಸ್ವಿ ಯಾದವ್, ‘ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು 85%ಗೆ ಏರಿಕೆ ಮಾಡುತ್ತೇವೆ ಎಂದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ಅವರು, ಚಾಚಾ ಸಿಲುಕಿಕೊಂಡಿದ್ದಾರೆ. ಅವರು ಮೊದಲಿನಂತೆಯೇ ಇಲ್ಲ. ಅವರು ಇನ್ನು ಮುಂದೆ ಮುಖ್ಯಮಂತ್ರಿಯಾಗುವುದಿಲ್ಲ ಎಂದರು.

error: Content is protected !!